Breaking
25 Sep 2026, Fri

ಕಟಪಾಡಿ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗೆ ಬೆಂಕಿ: ಪ್ರಯಾಣಿಕರು ಅಪಾಯದಿಂದ ಪಾರು

ಉಡುಪಿ: ಕೆಎಸ್‌ ಆರ್‌ ಟಿಸಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಟಪಾಡಿ ಬಳಿ ನಡೆದಿದೆ.

ಬಸ್‌ ಚಾಲಕ ವಾಹನವನ್ನು ಚಲಾಯಿಸುತ್ತಿದ್ದ ವೇಳೆ ಇಂಜಿನ್ ಭಾಗದಲ್ಲಿ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಚಾಲಕನ ಸಮಯಪ್ರಜ್ಞೆಯಿಂದ ಬಸ್‌ ನ್ನು ರಸ್ತೆಯ ಬದಿಗೆ ನಿಲ್ಲಿಸಿ, ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಲಾಗಿದೆ. ಚಾಲಕ ಕೂಡಲೇ ಬಾಗಿಲು ಮೂಲಕ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ.

ಮಾಹಿತಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲದೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *