ಬಂಟ್ವಾಳ: ಏಷ್ಯ ನೆಟ್ ಸುವರ್ಣ ನ್ಯೂಸ್ ಚಾನೆಲ್ ಮತ್ತು ಕನ್ನಡ ಪ್ರಭಾ ಪತ್ರಿಕೆಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿ ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಿದ್ದಕಟ್ಟೆ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರಿಗೆ ಬೆಂಗಳೂರು ದಿ ಕ್ಯಾಪಿಟಲ್ ಹೋಟೆಲ್ ನಲ್ಲಿ ನಡೆದ ರಾಜ್ಯ ಮಟ್ಟದ ಸಮಾರಂಭದಲ್ಲಿ “ಸಹಕಾರ ಶಿರೋಮಣಿ – 2025” ಪ್ರಶಸ್ತಿಯನ್ನು ಪ್ರಧಾನ ಮಾಡಿ ಗೌರವಿಸಲಾಯಿತು.

ಈ ಪ್ರಶಸ್ತಿಯನ್ನು ಸಕ್ಕರೆ, ಜವುಳಿ ಸಚಿವರಾದ ಶಿವಾನಂದ ಪಾಟೀಲ್, ಕೃಷಿ ಸಚಿವ ಚೆಲುವರಾಯ ಸ್ವಾಮಿ, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ರವರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.

ಕಳೆದ ಐದು ವರ್ಷಗಳಿಂದ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಪ್ರಭಾಕರ ಪ್ರಭು ಅವರು, ಸಹಕಾರ ಕ್ಷೇತ್ರದ ಜೊತೆಗೆ ವಿವಿಧ ಜನಪಯೋಗಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಹಿನ್ನೆಲೆಯಲ್ಲಿ ಈ ಗೌರವಾನ್ವಿತ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಗಿದೆ.









