Breaking
1 Apr 2026, Wed

ನಿಷೇಧಿತ ಎಮ್‌ಡಿಎಮ್‌ಎ ಮಾರಾಟ ಪ್ರಕರಣ: ಆರೋಪಿ ಬಂಧನ

ಕೊಣಾಜೆ: ನಿಷೇಧಿತ ಎಮ್ ಡಿಎಮ್ ಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಶ್ರೀರಂಗಪಟ್ಟಣ ಹುಲಿಕೆರೆ ನಿವಾಸಿ ಜೋರ್ಡನ್ (21 ವ ) ಎಂದು ಗುರುತಿಸಲಾಗಿದೆ.

ಆರೋಪಿಯು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಪುಣಿ ಗ್ರಾಮದ ನವಗ್ರಾಮ ಸೈಟ್ ನಾರ್ಯಗುತ್ತು ಗುಡ್ಡ ಪ್ರದೇಶದಲ್ಲಿ ಮಾದಕ ವಸ್ತುವನ್ನು ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ 55 ಗ್ರಾಂ ಎಮ್ ಡಿಎಮ್ ಎ ಮಾದಕ ವಸ್ತು, ಒಂದು ಮೊಬೈಲ್ ಫೋನ್, ಸೇರಿದಂತೆ ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *