Breaking
21 Jun 2026, Sun

ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಉಡುಪಿ: ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಣಿಪಾಲದ ದಶರಥನಗರದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಆಟೋ ಚಾಲಕ ದಾವಣಗೆರೆ ಮೂಲದ ಮಂಜುನಾಥ್ ಕಾಮತ್ (45) ಎಂದು ಗುರುತಿಸಲಾಗಿದೆ.

ಮಣಿಪಾಲದ ದಶರಥನಗರದ ಅಂಗಡಿಯೊಂದರ ಕೊಠಡಿಯಲ್ಲಿ ವಾಸವಿದ್ದ ಮಂಜುನಾಥ್ ಕಾಮತ್ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಘಟನೆಯು ಸುಮಾರು ನಾಲ್ಕು ದಿನಗಳ ಹಿಂದೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಮೃತದೇಹ ಕೊಳೆತು ದುರ್ವಾಸನೆ ಹರಡಲು ಆರಂಭಿಸಿದಾಗ ಸಾರ್ವಜನಿಕರಿಗೆ ವಿಷಯ ತಿಳಿದುಬಂದಿದೆ. ಮಾಹಿತಿ ಪಡೆದ ತಕ್ಷಣ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ವಿಧಿವಿಜ್ಞಾನ ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *