Breaking
23 Dec 2024, Mon

ನ. 25 ರಂದು ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ನ ಕಲ್ಲಡ್ಕ ಶಾಖೆಯ ನೂತನ ಕಟ್ಟಡ ‘ಸಮೃದ್ಧಿ’ ಯ ಉದ್ಘಾಟನೆ

ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ಇದರ ಕಲ್ಲಡ್ಕ ಶಾಖೆಯ ನೂತನ ಕಟ್ಟಡ ‘ಸಮೃದ್ಧಿ’ ಯ ಉದ್ಘಾಟನೆ ಹಾಗೂ ಸ್ವಂತ ಕಟ್ಟಡಕ್ಕೆ ಸ್ಥಳಾಂತರ ಕಾರ್ಯಕ್ರಮ ಸೋಮವಾರ ನಡೆಯಲಿದೆ.

ಮಧ್ಯಾಹ್ನ 12 ಗಂಟೆಗೆ ಸಹಕಾರಿ ಸಂಘದ ಅಧ್ಯಕ್ಷ ಹೆಚ್.ಜಗನ್ನಾಥ ಸಾಲಿಯಾನ್ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ನೂತನ ಕಟ್ಟಡವನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಉದ್ಘಾಟಿಸಲಿದ್ದಾರೆ. ಶಾಖಾ ಕಚೇರಿಯನ್ನು ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಭದ್ರತಾ ಕೊಠಡಿಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉದ್ಘಾಟಿಸುವರು. ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಕಟ್ಟಡದ ಹೆಸರು ಅನಾವರಣ ಮಾಡಲಿದ್ದಾರೆ. ದ.ಕ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್ ಹೆಚ್.ಎನ್ ದೀಪ ಪ್ರಜ್ವಲನೆ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ಕೆ.ಪದ್ಮನಾಭ ಕೊಟ್ಟಾರಿ, ರುಕ್ಮಯ್ಯ ಪೂಜಾರಿ, ಕ್ಯಾಂಪ್ಕೋ ನಿರ್ದೇಶಕ ಎಸ್.ಆರ್. ಸತೀಶ್ಚಂದ್ರ, ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಬಿ.ಕೆ.ಅಣ್ಣು ಪೂಜಾರಿ, ಗೋಳ್ತಮಜಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮಾ ಪುರುಷೋತ್ತಮ ಇನ್ನಿತರ ಗಣ್ಯರು ಭಾಗವಹಿಸುವರು.

Leave a Reply

Your email address will not be published. Required fields are marked *