Breaking
25 Sep 2026, Fri

ಓಮನ್‌ನಲ್ಲಿ ಸರಣಿ ಅಪಘಾತ: ಉಡುಪಿ ಮೂಲದ ಯುವಕ ಚೇತನ್ ಸಾವು

ಉಡುಪಿ: ಓಮನ್‌ನಲ್ಲಿ ನಡೆದ ಸರಣಿ ಅಪಘಾತದಲ್ಲಿ ಉಡುಪಿ ಕಾಪು ಸಮೀಪದ ಉಚ್ಚಿಲ ಕಲತ್ತೂರು ನಿವಾಸಿ ಚೇತನ್ (26) ಮೃತಪಟ್ಟ ಘಟನೆ ನಡೆದಿದೆ.

ಫೆ. 8 ರಂದು ಮುಂಜಾನೆ ಓಮನ್‌ನ ಉತ್ತರ ಅಲ್ ಬಟಿನಾ ಗವರ್ನರೇಟ್‌ನ ಲಿವಾ ವಿಲಾಯತ್‌ನಲ್ಲಿ ಮೂರು ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಅಪಘಾತದ ನಂತರ ಅವಶೇಷಗಳಲ್ಲಿ ಸಿಲುಕಿದ್ದವರನ್ನು ರಕ್ಷಣಾ ಸಿಬ್ಬಂದಿ ಹೊರತೆಗೆಯುವ ಕಾರ್ಯಾಚರಣೆ ನಡೆಸಿದ್ದು, ವೈದ್ಯಕೀಯ ತಂಡಗಳು ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *