Breaking
25 Sep 2026, Fri

ಉಡುಪಿಯಲ್ಲಿ ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು: ಪ್ರಯಾಣಿಕರು ಅಪಾಯದಿಂದ ಪಾರು

ಉಡುಪಿ : ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ರಸ್ತೆ ಮಧ್ಯದಲ್ಲಿ ಕಾರು ಹೊತ್ತಿ ಉರಿದ ಘಟನೆ ಫೆ.9 ರಂದು ನ್ಯಾರ್ಮ್ ಶ್ರೀ ಜಾರಂದಾಯ ದೈವಸ್ಥಾನದ ಬಳಿ ನಡೆದಿದೆ.

ಕಾರು ಮಂಗಳೂರಿನಿಂದ ಶಿರ್ವ ಕಡೆಗೆ ತೆರಳುತ್ತಿದ್ದ ವೇಳೆ ಎಂಜಿನ್ ವಿಭಾಗದಿಂದ ಹೊಗೆ ಹೊರಹೊಮ್ಮುವುದನ್ನು ಗಮನಿಸಿದ ಚಾಲಕ ತಕ್ಷಣವೇ ಎಚ್ಚೆತ್ತು ಕಾರಿನಲ್ಲಿದ್ದ ಐವರು ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಯುವಂತೆ ಸೂಚಿಸಿದ್ದಾರೆ. ಕ್ಷಣಾರ್ಧದಲ್ಲೇ ಬೆಂಕಿಯ ಜ್ವಾಲೆಗಳು ಇಡೀ ಕಾರನ್ನು ಆವರಿಸಿ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಘಟನೆಯಲ್ಲಿ ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *