Breaking
1 Apr 2026, Wed

ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆ: ತ್ಯಾಜ್ಯ ನಿರ್ವಹಣೆಗೆ ರೂ.48 ಲಕ್ಷ ಮಂಜೂರು

ಬಂಟ್ವಾಳ: ತಾಲೂಕು ಆಸ್ಪತ್ರೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಅಧ್ಯಕ್ಷತೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆ ನಡೆಯಿತು.

ತಾಲೂಕು ಆಸ್ಪತ್ರೆಯ ತ್ಯಾಜ್ಯ ನಿರ್ವಹಣೆಗೆ MRPLನ ಸಿಎಸ್‌ಆರ್ ನಿಧಿಯಿಂದ ಶಾಸಕರ ಶಿಫಾರಸ್ಸಿನ ಮೇರೆಗೆ ರೂ.48 ಲಕ್ಷ ಮಂಜೂರಾಗಿದ್ದು, ಶೀಘ್ರದಲ್ಲೇ STP ಪ್ಲಾಂಟ್ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸಭೆಗೆ ತಿಳಿಸಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ನಿರ್ವಹಣೆ ಹಾಗೂ ವಿವಿಧ ಕಾಮಗಾರಿಗಳ ಪ್ರಗತಿ ಕುರಿತು ಸಮಾಲೋಚನೆ ನಡೆಸಲಾಯಿತು.

ಸಭೆಯಲ್ಲಿ ತಾಲೂಕು ಆಸ್ಪತ್ರೆಯ ವೈದ್ಯರಾದ ಡಾ. ಪುಷ್ಪಲತಾ, ಡಾ. ಅಶೋಕ್ ರೈ, ಉಪತಹಶೀಲ್ದಾರ್ ದಿವಾಕರ್, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಇಂಜಿನಿಯರ್ ತಾರಾನಾಥ ಸಾಲ್ಯಾನ್, ಪುರಸಭೆಯ ಇಂಜಿನಿಯರ್ ಡೊಮಿನಿಕ್ ಡಿಮೆಲ್ಲೊ, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ವೆಂಕಪ್ಪ ಪೂಜಾರಿ, ಜೋಸೆಫ್ ಪ್ರವೀಣ್ ರಾಡ್ರಿಗಸ್, ಅಶೋಕ್, ರೇಷ್ಮಾ ಟೀಲಿಸ್, ಪುರುಷೋತ್ತಮ ಬಂಗೇರ, ಶಿವಾನಂದ ನಾಯ್ಕ ಸೇರಿದಂತೆ ತಾಲೂಕು ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *