Breaking
6 Aug 2026, Thu

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಯುವಕ ಸಾವು

ಪುತ್ತೂರು: ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಫೆ. 10 ರಂದು ಚನ್ನರಾಯಪಟ್ಟಣದಲ್ಲಿ ನಡೆದಿದೆ.

ಮೃತಪಟ್ಟ ಯುವಕನನ್ನು ನಿಶಿತ್ ನಾಯ್ಕ್ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್’ನಲ್ಲಿ ಉದ್ಯೋಗದಲ್ಲಿದ್ದು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿಯಾಗಿದ್ದರು. ಅಲ್ಲದೇ ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರನಾಗಿಯೂ ಗುರುತಿಸಿಕೊಂಡಿದ್ದರು.

ನಿಶಿತ್ ನಾಯ್ಕ್ ಅವರು ಫೆ. 9ರಂದು ಮನೆಗೆ ತೆರಳುವ ಸಲುವಾಗಿ ಬೆಂಗಳೂರಿನಿಂದ ರೈಲಿನಲ್ಲಿ ಪ್ರಯಾಣ ಆರಂಭಿಸಿದ್ದರು. ಜನರಲ್ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರೈಲಿನಿಂದ ಬಿದ್ದಿರುವುದಾಗಿ ತಿಳಿದುಬಂದಿದೆ.

ಮೃತರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *