Breaking
25 Sep 2026, Fri

ಆನ್‌ಲೈನ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿ ಅರೆಸ್ಟ್

ಕುಂದಾಪುರ: ಅಕ್ರಮವಾಗಿ ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬ್ರಹ್ಮಾವರ ತಾಲೂಕಿನ ಬಲ್ಕುದ್ರು ಗ್ರಾಮದ ಹಂಗರಕಟ್ಟೆ ನಿವಾಸಿ ಮನಿತ್ (26 ವ) ಎಂದು ಗುರುತಿಸಲಾಗಿದೆ.

ವಿಶ್ವಕಪ್ ಟಿ20 ಕ್ರಿಕೆಟ್ ಪಂದ್ಯಗಳಿಗೆ ಸಂಬಂಧಿಸಿ ಆನ್ ಲೈನ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಈತ ಫೆ. 9 ರಂದು ಪಾಂಡೇಶ್ವರ ಗ್ರಾಮ ವ್ಯಾಪ್ತಿಯ ಕೋಸ್ಟಲ್ ಪ್ಯಾರಡೈಸ್ ಹೋಟೆಲ್ ಬಳಿಯಲ್ಲಿ ಬೆಟ್ಟಿಂಗ್‌ ನಡೆಸುತ್ತಿದ್ದನು. ಈ ಬಗ್ಗೆ ಮಾಹಿತಿ ಪಡೆದ ಕೋಟ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದ್ದಾರೆ.

ಪೊಲೀಸರ ದಾಳಿ ವೇಳೆ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಇತರ ಸಾರ್ವಜನಿಕರು ಸ್ಥಳದಿಂದ ಪರಾರಿಯಾಗಿದ್ದು ಆರೋಪಿ ಮನಿತ್‌ ನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್‌ಗೆ ಬಳಸಲಾಗುತ್ತಿದ್ದ ಐಫೋನ್ ಮತ್ತು ಬೆಟ್ಟಿಂಗ್ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *