Breaking
11 Feb 2026, Wed

ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ: ಆರೋಪಿಯ ಬಂಧನ

ಕಾಸರಗೋಡು: ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಕಾಸರಗೋಡು ವಿದ್ಯಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೊಲ್ಲಂಗಾನ ದ ಮುಹಮ್ಮದ್ ರಫೀಕ್ ಬಿ. (39) ಎಂದು ಗುರುತಿಸಲಾಗಿದೆ.

ತನಿಖೆ ನಡೆಸುತ್ತಿದ್ದ ವೇಳೆ, ಕಾರೊಂದು ಪೊಲೀಸರ ತಪಾಸಣೆಯನ್ನು ತಪ್ಪಿಸಿಕೊಂಡು ಸಾಗಲು ಯತ್ನಿಸಿದೆ. ಇದನ್ನು ಗಮನಿಸಿದ ಪೊಲೀಸರು ಕಾರನ್ನು ಬೆನ್ನಟ್ಟಿ ತಡೆದು ತಪಾಸಣೆ ನಡೆಸಿದ್ದಾರೆ.

ತಪಾಸಣೆ ವೇಳೆ ಕಾರಿನೊಳಗಿನಿಂದ ಲಕ್ಷಾಂತರ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ಪತ್ತೆಯಾಗಿದ್ದು, ಆರೋಪಿಯಿಂದ ಒಟ್ಟು 50 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *