Breaking
11 Feb 2026, Wed

ಕಾರ್ಕಳದಲ್ಲಿ ಇಸ್ಪೀಟ್ ಜುಗಾರಿ ಅಡ್ಡೆಗೆ ದಾಳಿ: ಎಂಟು ಮಂದಿ ಬಂಧನ

ಕಾರ್ಕಳ: ಇಸ್ಪೀಟ್ ಜುಗಾರಿ ಆಟ ನಡೆಯುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಕಾರ್ಕಳ ನಗರ ಪೊಲೀಸ್ ಠಾಣಾ ಸಿಬ್ಬಂದಿಗಳು ಎಂಟು ಮಂದಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಉಮ್ಮರ ಫಾರೂಕ್ (62), ಅಬ್ದುಲ್ ಅಜೀಜ್ (40), ಸತೀಶ ಎಸ್. ಪ್ರಭು (49), ಅಬ್ದುಲ್ ರಹಿಮಾನ್ (49), ಸಮೀರ್ (46), ಸುಲೇಮಾನ್ (45), ಇರ್ಫಾನ್ (26) ಹಾಗೂ ಚೇತಕ್ (38) ಎಂದು ಗುರುತಿಸಲಾಗಿದೆ.

ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ನಕ್ರೆ ಬೈಲ್ಬೆಟ್ಟು ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಆರೋಪಿಗಳು ಹಣವನ್ನು ಪಣವಾಗಿರಿಸಿ ಇಸ್ಪೀಟ್ ನಿಂದ ಅಂದರ್ – ಬಾಹರ್ ಎಂಬ ಜುಗಾರಿ ಆಟ ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ದಾಳಿ ನಡೆಸಿದ್ದಾರೆ.

ದಾಳಿಯ ವೇಳೆ ಎಂಟು ಮಂದಿಯನ್ನು ಬಂಧಿಸಲಾಗಿದ್ದು ಇನ್ನೂ ಮೂವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಬಂಧಿತ ಆರೋಪಿಗಳಿಂದ ಜುಗಾರಿ ಆಟಕ್ಕೆ ಬಳಸಲಾಗುತ್ತಿದ್ದ ರೂ.22,690 ನಗದು, 52 ಇಸ್ಪೀಟ್, 16 ಹೊಸ ಇಸ್ಪೀಟ್ ಪ್ಯಾಕೆಟ್, 10 ಪ್ಲಾಸ್ಟಿಕ್ ಕುರ್ಚಿಗಳು, 4 ಪ್ಲಾಸ್ಟಿಕ್ ಟೇಬಲ್ ಗಳು ಹಾಗೂ 9 ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *