Breaking
11 Feb 2026, Wed

ವಿಟ್ಲದ ಖಾಸಗಿ ಐಟಿಐ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮಧ್ಯೆ ಗಲಾಟೆ: ಚೂರಿ ಇರಿತ, ಇಬ್ಬರಿಗೆ ಗಾಯ

ವಿಟ್ಲ: ಖಾಸಗಿ ಐಟಿಐ ಕಾಲೇಜಿನಲ್ಲಿ ಕ್ಷುಲಕ ಕಾರಣಕ್ಕೆ ಇಬ್ಬರು ವಿದ್ಯಾರ್ಥಿಗಳ ನಡುವೆ ವಾಗ್ವಾದ ಉಂಟಾಗಿ ಚೂರಿಯಿಂದ ಇರಿದ ಘಟನೆ ಇಂದು(ಫೆ.11) ನಡೆದಿದೆ.

ಪ್ರಥಮ ವರ್ಷದ ಎಲೆಕ್ಟ್ರಿಷಿಯನ್‌ ಐಟಿಐ ಕಲಿಯುತ್ತಿದ್ದ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ಉಂಟಾಗಿ ಬಳಿಕ ಗಲಾಟೆ ತಿರುಗಿದೆ. ಈ ವೇಳೆ ಇಬ್ಬ ವಿದ್ಯಾರ್ಥಿ ಮತ್ತೊಬ್ಬನಿಗೆ ಚೂರಿಯಿಂದ ಇರಿದಿದ್ದಾನೆ ಎಂದು ತಿಳಿದುಬಂದಿದೆ.

ಈ ಗಲಾಟೆಯನ್ನು ನಿಲ್ಲಿಸಲು ಬಂದ ಮತ್ತೊಬ್ಬ ವಿದ್ಯಾರ್ಥಿಗೂ ಗಾಯಗಳಾಗಿದೆ. ಗಾಯಗಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಧಾವಿಸಿದ ವಿಟ್ಲ ಪೊಲೀಸರ ತಂಡ ಮಾಹಿತಿ ಸಂಗ್ರಹಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *