Breaking
25 Sep 2026, Fri

ಮಣಿಪಾಲದಲ್ಲಿ ಗಾಂಜಾ ಮಾರಾಟ: ತಲೆಮರೆಸಿಕೊಂಡಿದ್ದ ನಾಲ್ಕನೇ ಆರೋಪಿ ಬಂಧನ

ಮಣಿಪಾಲ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಮಲ್ಲಪುರಂ ಮೂಲದ ಪ್ರಸ್ತುತ ಮಣಿಪಾಲದಲ್ಲಿ ವಾಸವಾಗಿರುವ ಅಜ್ಮಲ್(26) ಎಂದು ಗುರುತಿಸಲಾಗಿದೆ.

ಆ.16, 2025 ರಂದು ಮಣಿಪಾಲ ಈಶ್ವರ ನಗರದ ರೂಮ್‌ನಲ್ಲಿ ಗಾಂಜಾ ಹಾಗೂ ಎಲ್‌ಎಸ್‌ಡಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದರು.
ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ನಾಲ್ಕನೇ ಆರೋಪಿ ಅಜ್ಮಲ್‌ನನ್ನು ಮಣಿಪಾಲ ಸಿಂಡಿಕೇಟ್ ಸರ್ಕಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ ಸುಮಾರು 1 ಲಕ್ಷ ರೂ. ಮೌಲ್ಯದ 2084 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *