Breaking
1 Apr 2026, Wed

ಉಪ್ಪಿನಂಗಡಿಯಲ್ಲಿ ಪಿಕಪ್ ಪಲ್ಟಿ: ಚಾಲಕ ಸ್ಥಳದಲ್ಲೇ ಸಾವು

ಉಪ್ಪಿನಂಗಡಿ: ಪಿಕಪ್‌ ವಾಹನವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ತೆಕ್ಕಾರು ಗ್ರಾಮದ ಕನರಾಜೆ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ಹರಿಶ್ಚಂದ್ರ ಎಂಬವರ ಮಗ ಹೇಮಚಂದ್ರ (32) ಎಂದು ಗುರುತಿಸಲಾಗಿದೆ.

ಪಿಕಪ್ ವಾಹನದಲ್ಲಿ ಸೆಂಟ್ರಿಂಗ್ ಕೆಲಸದ ಸಾಮಗ್ರಿಗಳನ್ನು ಸಾಗಿಸಲಾಗಿಸುತ್ತಿದ್ದ ವೇಳೆ ಮೇಲ್ಭಾಗದ ರಸ್ತೆಯಿಂದ ವಾಹನ ಕೆಳಭಾಗದ ರಸ್ತೆಗೆ ಪಲ್ಟಿಯಾಗಿ ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಚಾಲಕ ಹೇಮಚಂದ್ರ ಅವರಿಗೆ ಗಂಭೀರ ಗಾಯವಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪಿಕಪ್‌ ನಲ್ಲಿದ್ದ ಉಮ್ಮರಬ್ಬ (51) ಎಂಬವರು ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *