Breaking
23 Dec 2024, Mon

ಲಕ್ಷದೀಪೋತ್ಸವ, ಚಂಪಾಷಷ್ಟಿ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ದಲ್ಲಿ ನ.26 ರಿಂದ ಡಿ.12ರವರೆಗೆ ಪ್ರಮುಖ ಸೇವೆಗಳು ಅಲಭ್ಯ

ಕಡಬ:ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನ.27ರಿಂದ ಡಿ.12ರವರೆಗೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ದೇಗುಲದಲ್ಲಿ ಪ್ರಮುಖ ಸೇವೆಗಳು ವ್ಯತ್ಯಯವಾಗಲಿವೆ.

ನ.25ರಿಂದ ಡಿ.12ರವರೆಗೆ ಸರ್ಪ ಸಂಸ್ಕಾರ ಸೇವೆ ನಡೆಯುವುದಿಲ್ಲ. ಡಿ.13ರಿಂದ ಸರ್ಪಸಂಸ್ಕಾರ ಸೇವೆ ಆರಂಭವಾಗಲಿದೆ. ಇತರ ಸೇವೆಗಳು ಎಂದಿನಂತೆ ನಡೆಯಲಿವೆ. ಲಕ್ಷದೀಪೋತ್ಸವ, ಚೌತಿ, ಪಂಚಮಿ ಮತ್ತು ಷಷ್ಠಿ ದಿನ ಕೆಲವು ಸೇವೆಗಳು ನೆರವೇರುವುದಿಲ್ಲ ಎಂದು ದೇವಳದ ಪ್ರಕಟಣೆ ತಿಳಿಸಿದೆ.

ಲಕ್ಷದೀಪೋತ್ಸವ (ನ.30), ಚೌತಿ (ಡಿ.5), ಪಂಚಮಿ (ಡಿ.6) ದಿನ ರಾತ್ರಿ ಹೊತ್ತಿನಲ್ಲಿ ಪ್ರಾರ್ಥನೆ ಸೇವೆ ಇರುವುದಿಲ್ಲ. ಚಂಪಾಷಷ್ಠಿ (ಡಿ.7)ಯಂದು ಮಧ್ಯಾಹ್ನ ಪ್ರಾರ್ಥನೆ ಸೇವೆ ನಡೆಯುವುದಿಲ್ಲ. ಚಂಪಾಷಷ್ಠಿ ದಿನ ಆಶ್ಲೇಷ ಬಲಿ ಮತ್ತು ನಾಗಪ್ರತಿಷ್ಠೆ ನೆರವೇರುವುದಿಲ್ಲ. ಲಕ್ಷದೀಪೋತ್ಸವ (ನ.30), ಚೌತಿ (ಡಿ.5), ಪಂಚಮಿ (ಡಿ.6), ಚಂಪಾಷಷ್ಠಿ (ಡಿ.7) ಮತ್ತು ಕೊಪ್ಪರಿಗೆ ಇಳಿಯುವ ಮಹಾಸಂಪ್ರೋಕ್ಷಣೆಯ ದಿನ (ಡಿ.12)ದಂದು ಪಂಚಾಮೃತ ಮಹಾಭಿಷೇಕ ಸೇವೆ ನಡೆಯುವುದಿಲ್ಲ.

ನ.27ರಿಂದ ಡಿ.12ರವರೆಗೆ ಸಂಜೆಯ ಆಶ್ಲೇಷ ಬಲಿ ಸೇವೆ ನೆರವೇರುವುದಿಲ್ಲ.ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ನ.26ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯದ ಇರುವುದರಿಂದ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಭಕ್ತರಿಗೆ ದೇವರ ದರ್ಶನ, ಸೇವೆ ನೆರವೇರಿಸಲು ಅವಕಾಶ ಇರುವುದಿಲ್ಲ. 2 ಗಂಟೆಯ ನಂತರ ಅವಕಾಶ ನೀಡಲಾಗುವುದು ಎಂದು ದೇವಳದ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *