Breaking
25 Sep 2026, Fri

ಕರ್ನಾಟಕ ಸಹಕಾರ ಶಿರೋಮಣಿ 2025 ಪ್ರಶಸ್ತಿ ಪುರಸ್ಕೃತ ಪ್ರಭಾಕರ ಪ್ರಭು ಅವರಿಗೆ ಸಂಗಬೆಟ್ಟು ಗ್ರಾ.ಪಂ. ವತಿಯಿಂದ ಅಭಿನಂದನೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲೂಕು, ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಇದರಲ್ಲಿ ನಿರ್ದೇಶಕರಾಗಿ, ಉಪಾಧ್ಯಕ್ಷರಾಗಿ, ಪ್ರಸ್ತುತ ಅಧ್ಯಕ್ಷರಾಗಿ ಸಾರ್ಥಕ ಸಹಕಾರ ಕ್ಷೆತ್ರದ ಸಾಧನೆ ಮತ್ತು ವಿವಿಧ ಕ್ಷೇತ್ರದಲ್ಲಿ ಸಲ್ಲಿಸಿದ ಸಮಾಜ ಸೇವೆಯನ್ನು ಗುರುತಿಸಿ ರಾಜ್ಯದ ಪ್ರತಿಷ್ಠಿತ ಪತ್ರಿಕೆ ಕನ್ನಡ ಪ್ರಭ ಹಾಗೂ ರಾಜ್ಯದ ಪ್ರಮುಖ ಸುದ್ದಿವಾಹಿನಿ ಏಷಿಯಾನೆಟ್ ಸುವರ್ಣನ್ಯೂಸ್ ನವರು ಕರ್ನಾಟಕ ಸಹಕಾರ ಶಿರೋಮಣಿ 2025 ಎಂಬ ರಾಜ್ಯ ಮಟ್ಟದ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದು, ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿರುವ ಪ್ರಭಾಕರ ಪ್ರಭು ಅವರನ್ನು ಸಂಗಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಜೀವಿ ಕೋಟಿಯಪ್ಪ ಪೂಜಾರಿ, ಉಪಾಧ್ಯಕ್ಷ ಸುರೇಶ್ ಕುಲಾಲ್, ಮಾಜಿ ಅಧ್ಯಕ್ಷ ಸತೀಶ್ ಪೂಜಾರಿ ಅಲಕ್ಕೆ, ಸದಸ್ಯರಾದ ಸಂದೇಶ ಶೆಟ್ಟಿ, ದಾಮೋದರ ಪೂಜಾರಿ, ಉದಯ ಪೂಜಾರಿ, ದೇವಪ್ಪ ಕರ್ಕೇರ, ಸುನೀಲ್ ಶೆಟ್ಟಿಗಾರ್, ವಿಮಲಾ ಮೋಹನ್,ಶಕುಂತಲಾ, ಶಾಂತ, ಪ್ರೇಮ, ವಿದ್ಯಾ ಪ್ರಭು, ಹೇಮಲತಾ,ಬೇನಾಡಿಕ್ಟಡಿ ಕೊಸ್ತ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪದ್ಮಾ ನಾಯ್ಕ್ ಸಿಬ್ಬಂದಿಗಳಾದ ಮಹಾಬಲ ನಾಯ್ಕ್, ಸುರೇಶ, ಸುಮತ, ಮಹಮ್ಮದ್ ಶಾಫಿ, ಕೇಶವತಿ, ಗ್ರಂಥಾಲಯ ಮೇಲ್ವಿಚಾರಕಿ ಶೋಭಾ, ಪ್ರಮುಖರಾದ ದೀಪಕ್ ಶೆಟ್ಟಿಗಾರ್, ಉಮೇಶ್ ಗೌಡ, ಪ್ರವೀಣ್ ಹೆಗ್ಡೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪಂಚಾಯತ್ ಕಾರ್ಯದರ್ಶಿ ರೋಹಿಣಿ ಸ್ವಾಗತಿಸಿದರು. ಪಂಚಾಯತ್ ಸಿಬ್ಬಂದಿ ಪ್ರಜ್ವಲ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *