Breaking
12 Feb 2026, Thu

ಏಣಿಯಿಂದ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಕಟಪಾಡಿ: ಮನೆಯ ಮಾಳಿಗೆಯಿಂದ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಕುತ್ಯಾರು ಕಾಂಜಾರಕಟ್ಟೆ ನಿವಾಸಿ ಪ್ರಕಾಶ ಆಚಾರ್ಯ (56) ಎಂದು ಗುರುತಿಸಲಾಗಿದೆ.

ಫೆ. 1 ರಂದು ರಾತ್ರಿ ಮನೆಯ ಮಾಳಿಗೆಗೆ ತೆರಳಿದ್ದ ಅವರು ಏಣಿಯಿಂದ ಕೆಳಗೆ ಇಳಿಯುವ ವೇಳೆ ಆಯತಪ್ಪಿ ಬಿದ್ದು ಗಂಬೀರವಾಗಿ ಗಾಯಗೊಂಡಿದ್ದರು.

ತಕ್ಷಣವೇ ಅವರನ್ನು ಮಂಗಳೂರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಫೆ. 10ರಂದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *