ಬೆಳ್ತಂಗಡಿ : ಜೇನು ಕೃಷಿ ಅಧ್ಯಯನಕ್ಕೆ ಶಾಲಾ ವಿದ್ಯಾರ್ಥಿಗಳನ್ನು ತೆರೆದ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಕರೆದುಕೊಂಡು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದಲ್ಲಿ ನಡೆದಿದೆ.

ಈ ವಿಚಾರಕ್ಕೆ ಆಕ್ರೋಶಗೊಂಡ ಮಕ್ಕಳ ಪೋಷಕರು ಮುಖ್ಯೋಪಾಧ್ಯಾಯ ಕಿರಣ್ ಅವರನ್ನು ತರಾಟೆಗೆ ತೆಗೆದುಕೊಂಡು ಮಕ್ಕಳಿಗೆ ಏನಾದರೂ ಅನಾಹುತ ನಡೆದರೆ ಯಾರು ಹೊಣೆ ಎಂದು ಎಂದು ಪ್ರಶ್ನಿಸಿದ್ದಾರೆ.

ಪಿಕಪ್ ಮತ್ತು ಟಿಪ್ಪರ್ ಸೇರಿದಂತೆ ಸರಕು ಸಾಗಣೆ ವಾಹನಗಳಲ್ಲಿ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗಲು ಮೋಟಾರು ಕಾಯ್ದೆ ಅಡಿಯಲ್ಲಿ ಅವಕಾಶವಿಲ್ಲದಿರುವಾಗ ಶಾಲಾ ಮಕ್ಕಳನ್ನು ಕರೆದೊಯ್ಯಿರುವುದು ಏಕೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.








