ಉಡುಪಿ: ಕುಂಜಿಬೆಟ್ಟುವಿನ ಎಂಜಿಎಂ ಕಾಲೇಜು ಸಮೀಪದಲ್ಲಿ ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. 12 ರಂದು ನಡೆದಿದೆ.

ಡಿಕ್ಕಿ ಹೊಡೆದ ಪಿಕಪ್ ವಾಹನ ಸ್ಥಳದಿಂದ ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು.
ಘಟನಾ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಗಾಯಾಳುವನ್ನು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.








