Breaking
13 Feb 2026, Fri

ಹೊಸಕೋಟೆ ಬಳಿ ಭೀಕರ ಸರಣಿ ಅಪಘಾತ: 7 ಮಂದಿ ಸ್ಥಳದಲ್ಲೇ ಸಾವು

ಬೆಂಗಳೂರು: ಕಾರು , ಬೈಕ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಇಂದು (ಫೆ. 13) ನಡೆದಿದೆ.

ಮೃತಪಟ್ಟವರಲ್ಲಿ ಆರು ಮಂದಿ ಬೆಂಗಳೂರಿನ ಕೊತ್ತನೂರು ಮೂಲದವರು ಎಂದು ಗುರುತಿಸಲಾಗಿದೆ. ಅವರು ಕಾಲೇಜು ವಿದ್ಯಾರ್ಥಿಗಳು ಎನ್ನಲಾಗಿದೆ.

ಮೃತಪಟ್ಟವರನ್ನು ಅಶ್ವಿನ್‌ ನಾಯರ್‌ ಹಾಗೂ ಕರಣ್ ಆಲಿ ಎಂದು ಗುರುತಿಸಲಾಗಿದೆ. ಮೃತಪಟ್ಟ ಬೈಕ್ ಸವಾರನನ್ನು ದೇವನಹಳ್ಳಿ ಮೂಲದ ಗಗನ್ ಎಂದು ಗುರುತಿಸಲಾಗಿದೆ.

ಹೆದ್ದಾರಿಯಲ್ಲಿ ಸಾಗುತ್ತಿದ್ದ ಎಕ್ಸ್ ಯುವಿ ಕಾರು ಮೊದಲು ಮುಂದೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದು, ಬಳಿಕ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ಅಪಘಾತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್‌.ಪಿ ಚಂದ್ರಕಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Leave a Reply

Your email address will not be published. Required fields are marked *