Breaking
13 Feb 2026, Fri

ಕಾರು ಹಾಗೂ ಬೈಕ್‌ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸಹ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

ಮೂಡುಬಿದಿರೆ : ಕಾರು ಮತ್ತು ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ರೋಟರಿ ಪಿಯುಸಿ ಕಾಲೇಜಿನ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬನ್ನಡ್ಕದಲ್ಲಿ ನಡೆದಿದೆ.

ಮೃತರನ್ನು ಮಾರ್ಪಾಡಿ ಗ್ರಾಮದ ಕೋಟೆಬಾಗಿಲಿನ ಶ್ರವಣ್ ಎಂದು ಗುರುತಿಸಲಾಗಿದೆ.

ಕಂಟೆಂಟ್ ಕ್ರಿಯೇಟರ್ ಸೂರಜ್ ಅಂಚನ್ ಅವರೊಂದಿಗೆ ಶ್ರವಣ್ ಸಹ ಸವಾರರಾಗಿ ಹೋಗುತ್ತಿದ್ದಾಗ ಕಾರ್ಕಳ ಕಡೆಯಿಂದ ವೇಗವಾಗಿ ಬಂದ ಕಾರು ಬೈಕ್‌ಗೆ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ತೀವ್ರತೆಗೆ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶ್ರವಣ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *