Breaking
8 Aug 2026, Sat

ಉಳ್ಳಾಲ ತಲಪಾಡಿಯಲ್ಲಿ ಮಾದಕ ವಸ್ತು ಮಾರಾಟ: ಆರೋಪಿಗಳ ಬಂಧನ

ಮಂಗಳೂರು: ಉಳ್ಳಾಲ ತಾಲೂಕಿನ ತಲಪಾಡಿ ಪ್ರದೇಶದಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಉಳ್ಳಾಲದ ಗಣೇಶ್ ಬೀಡಿ ವರ್ಕ್ಸ್ ಸಮೀಪದ ಬಸ್ತಿಪಡ್ಪು ನಿವಾಸಿ ಮುಸ್ತಫಾ ಸೀದಿಯಬ್ಬ(34), ಉಳ್ಳಾಲ, ಕೋಡಿ, ಡಿ ರೋಡ್ ನಿವಾಸಿ ಮೈಯದ್ದಿ(28), ಉಳ್ಳಾಲದ ಮುಕ್ಕಚೇರಿ, ಮೊಹಮ್ಮದ್ ಕಂಪೌಂಡು ನಿವಾಸಿ ಮೊಹಮ್ಮದ್ ಶಿಫಾನ್(28) ಎಂದು ಗುರುತಿಸಲಾಗಿದೆ.

ಬೆಂಗಳೂರು ನಗರದಿಂದ ಮಂಗಳೂರು ನಗರಕ್ಕೆ ಮಾದಕ ವಸ್ತುಗಳನ್ನು ತರಿಸಿ, ಬೂದು ಬಣ್ಣದ ಸ್ವಿಫ್ಟ್ ಕಾರಿನಲ್ಲಿ ಉಳ್ಳಾಲ ತಾಲೂಕಿನ ತಲಪಾಡಿ ಪರಿಸರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರೆಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ 11,90,000 ರೂ. ಮೌಲ್ಯದ 118.13 ಗ್ರಾಂ ತೂಕದ ಎಂಡಿಎಂಎ, ಮೊಬೈಲ್ ಫೋನ್-4, ಸ್ವೀಪ್ಟ್ ಕಾರು ಸಹಿತ ಒಟ್ಟು 17,95,000 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *