Breaking
25 Sep 2026, Fri

13 ವರ್ಷಗಳ ಹಿಂದೆ ಹಲ್ಲೆ ಮಾಡಿ ಪರಾರಿಯಾಗಿದ್ದಆರೋಪಿಯ ಬಂಧನ

ಬೆಳ್ತಂಗಡಿ: 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಆಲ್ವಿನ್ ರೊಡ್ರಿಗಸ್ (53) ಎಂದು ಗುರುತಿಸಲಾಗಿದೆ.

ಮಡಂತ್ಯಾರು ನಿವಾಸಿ ಚಿತ್ರಶೇಖರ್ ಮೇಲೆ ಹಲ್ಲೆ ನಡೆಸಿದ್ದ ಈತನ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬೆಂಗಳೂರಿನ ಸಂಪಂಗಿರಾಮನಗರದಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಅವರನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Leave a Reply

Your email address will not be published. Required fields are marked *