ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ ಕಾಮೆಂಟ್ ಮಾಡಿದ ಆರೋಪಿಗಳನ್ನು ಕುಂದಾಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಬೆಂಗಳೂರಿನ ಮತ್ತಿಕೆರೆ ನಿವಾಸಿ ಪ್ರಾಯದ ಪ್ರಕಾಶ್ ಎಸ್ (45 ವ) ಎಂದು ಗುರುತಿಸಲಾಗಿದೆ.

‘ಹೆಮ್ಮೆಯ ಕಾರ್ಯಕರ್ತ’ ಎಂಬ ಫೇಸ್ ಬುಕ್ ಖಾತೆಯಲ್ಲಿ ಅವಾಚ್ಯವಾಗಿ ಕಮೆಂಟ್ ಹಾಕಿದ್ದ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.







