ಸುಳ್ಯ: ಶೌಚಾಲಯದೊಳಗೆ ಮೃತಪಟ್ಟು ಕೊಳೆತ ಸ್ಥಿತಿಯಲ್ಲಿ ಯುವಕನೊಬ್ಬನ ಶವ ಪತ್ತೆಯಾದ ಘಟನೆ ಫೆ.13 ರಂದು ಸಂಜೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಅಡ್ಡನಪಾರೆಯಲ್ಲಿ ಬೆಳಕಿಗೆ ಬಂದಿದೆ.

ಅಡ್ಡನಪಾರೆ ನಿವಾಸಿಯಾಗಿರುವ ಗೋಪಾಲ ನಾಯ್ಕ ಎಂಬವರ ಪುತ್ರ ಮಹಾಬಲ ಎಂಬವರೇ ಶೌಚಾಲಯದೊಳಗೆ ಮೃತಪಟ್ಟು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿಯಾಗಿದ್ದಾರೆ.

ಫೆ.4ರಂದು ರಾತ್ರಿ ಅಮಲು ಪದಾರ್ಥ ಸೇವಿಸಿ, ಮನೆಗೆ ಬಂದಿದ್ದ ಮಹಾಬಲ ತನ್ನ ಮನೆಗೆ ಬೆಂಕಿ ಹಚ್ಚಿ ಬಳಿಕ ಅಲ್ಲಿಂದ ನಾಪತ್ತೆಯಾಗಿದ್ದ ಎನ್ನಲಾಗಿದೆ.
ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.







