Breaking
14 Feb 2026, Sat

ಎಂಡಿಎಂಎ ಮಾದಕ ವಸ್ತುಗಳ ಮಾರಾಟ ಜಾಲ ಭೇದಿಸಿದ ಹಾಸನ ಪೊಲೀಸ್, ಐವರು ಅರೆಸ್ಟ್

ಹಾಸನ: ಎಂಡಿಎಂಎ ಮಾದಕ ವಸ್ತುಗಳ ಮಾರಾಟ ಜಾಲವನ್ನು ಹಾಸನ ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಶಿವಮೊಗ್ಗ ಮೂಲದ ಫರ್ವೀಜ್ (29), ಸುಹೇಲ್ (24), ಅಬ್ದುಲ್ ಯಾಸಿನ್ (20), ಇಬ್ರತ್ ಖಾನ್ (24) ಹಾಗೂ ಹಾಸನದ ಸೈಯದ್ ಯೂಸಫ್ (23) ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿಯ ಮೇರೆಗೆ ಹಾಸನದ ರಾಜ್ಕುಮಾರ್ ನಗರ ಬಳಿಯ ಚೆಕ್ ಪೋಸ್ಟ್ ನಲ್ಲಿ ಸಂಚರಿಸುತ್ತಿದ್ದ ಎರ್ಟಿಗಾ ಕಾರನ್ನು ತಪಾಸಣೆ ನಡೆಸಿದ ವೇಳೆ ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಈ ವೇಳೆ ಬಂಧಿತರಿಂದ ಅಂದಾಜು 2 ಲಕ್ಷಕ್ಕೂ ಅಧಿಕ ಮೌಲ್ಯದ 40 ಗ್ರಾಂ ಎಂಡಿಎಂಎ ಹಾಗೂ ಆರೋಪಿಗಳು ಬಳಸುತ್ತಿದ್ದ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪೆನ್ಷನ್ ಮೊಹಲ್ಲಾ ಠಾಣೆಯ ಸಿಪಿಐ ಸ್ವಾಮಿನಾಥ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಿಎಸ್ಐ ರವಿಶಂಕರ್ ಹಾಗೂ ಸಿಬ್ಬಂದಿ ಪ್ರಸನ್ನಕುಮಾರ್, ದಿಲೀಪ್, ಪುನೀತ್, ಲೋಕೇಶ್, ಹನುಮೇಶ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *