Breaking
21 Sep 2026, Mon

2017ರ ರೆಖ್ಯ ಗ್ರಾಮದ ದರೋಡೆ ಪ್ರಕರಣ, ಆರೋಪಿಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ: ದರೋಡೆ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಕಳೆದ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಂಗಳೂರಿನ ಗಿಡ್ಡೆನಹಳ್ಳಿ ಬಳಿ ಫೆ.13 ರಂದು ಧರ್ಮಸ್ಥಳ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ನಂಜುಂಡ ಮಾಗಡಿ(39) ಎಂದು ಗುರುತಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ 2017ರಲ್ಲಿ ರೆಖ್ಯ ಗ್ರಾಮದಲ್ಲಿ ನಡೆದ ದರೋಡೆ ಪ್ರಕರಣದ ಸಂಬಂಧ ಆರೋಪಿಯ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಯ ಪತ್ತೆಗಾಗಿ ತೀವ್ರ ಶೋಧ ನಡೆಸಿದ ಧರ್ಮಸ್ಥಳ ಠಾಣೆಯ ಪೊಲೀಸರು ನಂಜುಂಡ ಬೆಂಗಳೂರಿನ ಗಿಡ್ಡೆನಹಳ್ಳಿ ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾದ ಕೊಡಲೇ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

ನ್ಯಾಯಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *