Breaking
14 Feb 2026, Sat

ಶಿರ್ತಾಡಿಯಲ್ಲಿ ಟೆಂಪೋ- ಬೈಕ್ ಅಪಘಾತ: ಸವಾರನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಮೂಡುಬಿದಿರೆ: ಟೆಂಪೋ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಮೂಡುಬಿದಿರೆ ಸಮೀಪದ ಶಿರ್ತಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಕೊಣಾಜೆಯ ಹೌದಲ್ ಅಂಗನವಾಡಿ ಕೇಂದ್ರದ ಬಳಿ ಫೆ.14 ರಂದು ನಡೆದಿದೆ.

ಘಟನೆಯಲ್ಲಿ ಮೂಡುಬಿದಿರೆಯ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪದವೀಧರ ಸಹಾಯಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ವಿದೀಪ್ ಡಿ.ಕೆ. ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ ತಿಳಿದು ಬಂದಿದೆ.

ಈ ವೇಳೆ ಸ್ಥಳೀಯರು ತಕ್ಷಣವೇ ವಿದೀಪ್ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ವ್ಯವಸ್ಥೆ ಮಾಡಿದ್ದಾರೆ. ಅಪಘಾತ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡಸಿದ್ದಾರೆ.

ಇನ್ನಷ್ಟು ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *