Breaking
21 Sep 2026, Mon

9 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿ ಮಂಗಳೂರಿನಲ್ಲಿ ಅರೆಸ್ಟ್

ಪುತ್ತೂರು: ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಪ್ರಸ್ತುತ ಮಂಗಳೂರಿನ ಪದವು ಎಂಬಲ್ಲಿ ವಾಸ್ತವ್ಯವಿರುವ ಪುತ್ತೂರು ಕಸಬಾ ಗ್ರಾಮದ ಅಬ್ಬಾಸ್ ಆಲಿ ಅಲ್ತಾಫ್(55) ಎಂದು ಗುರುತಿಸಲಾಗಿದೆ.

ಈತನನ್ನು ಮಂಗಳೂರಿನ ಬಿಕರ್ನಕಟ್ಟೆ ಕುಲಶೇಖರದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *