Breaking
16 Feb 2026, Mon

ಬೆಂಗಳೂರು : ಬಸ್ – ಕಾರಿನ ನಡುವೆ ಭೀಕರ ಅಪಘಾತ : ಐವರು ದುರ್ಮರಣ

ಬೆಂಗಳೂರು: ನಗರದ ಹೊರವಲಯದ ನೆಲಮಂಗಲ ಜಿಂದಾಲ್ ಸಮೀಪ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ದುರಂತದಲ್ಲಿ ಐವರು ಮೃತಪಟ್ಟಿದ್ದಾರೆ.

ತುಮಕೂರು ದಿಕ್ಕಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕವನ್ನು ದಾಟಿ ಎದುರು ದಿಕ್ಕಿನಲ್ಲಿ ಸಂಚರಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗೆ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್‌ನ ಮುಂಭಾಗಕ್ಕೂ ಭಾರೀ ಹಾನಿಯಾಗಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದುರ್ಗಾ ಪ್ರಸಾದ್ (20), ಕೇಶವ್ (19), ಲಲಿತ್ (22), ಹರ್ಷಿತ್ (20) ಹಾಗೂ ಮತ್ತೋರ್ವ ಲಲಿತ್ (22) ಮೃತಪಟ್ಟಿದ್ದಾರೆ. ಘಟನೆಯ ತೀವ್ರತೆಗೆ ನಾಲ್ವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಈ ಸಂಬಂಧ ಮುದ್ದನಾಯಕನ ಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *