Breaking
16 Feb 2026, Mon

ರಾಜಸ್ಥಾನದ ಭೀವಾಡಿ ಕೈಗಾರಿಕಾ ಪ್ರದೇಶದಲ್ಲಿ ಭೀಕರ ಅಗ್ನಿ ಅವಘಡ, ಏಳು ಮಂದಿ ಕಾರ್ಮಿಕರು ಸಜೀವ ದಹನ, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

ರಾಜಸ್ಥಾನ: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಏಳು ಮಂದಿ ಕಾರ್ಮಿಕರು ಸಜೀವ ದಹನವಾಗಿ, ಸುಮಾರು 10 ಮಂದಿ ಕಾರ್ಮಿಕರು ಇನ್ನೂ ಕಟ್ಟಡದೊಳಗೆ ಸಿಲುಕಿಕೊಂಡಿರುವ ಘಟನೆ ರಾಜಸ್ಥಾನದ ಭೀವಾಡಿ ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿ ಫೆ.16 ರಂದು ನಡೆದಿದೆ.

ಇಂದು ಬೆಳಗ್ಗೆ ಸುಮಾರು 9:30ರ ಸುಮಾರಿಗೆ ಕಾರ್ಖಾನೆಯಲ್ಲಿ ಕೆಲಸ ಆರಂಭವಾಗಿದ್ದ ವೇಳೆಯಲ್ಲಿ ಈ ಅಗ್ನಿ ಅವಘಡ ಉಂಟಾಗಿದೆ.

ಈ ಸಂದರ್ಭ 20 ರಿಂದ 25 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಅನ್ನುವ ಮಾಹಿತಿ ಇದ್ದು ಕೆಲವೇ ನಿಮಿಷಗಳಲ್ಲಿ ಬೆಂಕಿಯ ತೀವ್ರತೆ ಇಡೀ ಕಾರ್ಖಾನೆಯನ್ನು ಆವರಿಸಿದೆ. ಈ ವೇಳೆ ಕೆಲವರು ಪ್ರಾಣಾಪಾಯದಿಂದ ಪಾರಾಗುವಲ್ಲಿ ಯಶಸ್ವಿಯಾದ್ರೆ, ಏಳು ಮಂದಿ ಸ್ಥಳದಲ್ಲೇ ಬಲಿಯಾಗಿದ್ದಾರೆ.

ಪೊಲೀಸ್ ಗಸ್ತು ತಿರುಗುವ ವೇಳೆ ಈ ಘಟನೆ ಬೆಳಕಿಗೆ ಬಂದಿದ್ದು ಅವರು ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿಗಳು. ಸುಮಾರು ಒಂದೂವರೆ ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದೆ.

ಘಟನೆಗೆ ಸಂಬಂಧಿಸಿದಂತೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಲಾಗಿದ್ದು ಸುರಕ್ಷತಾ ಕ್ರಮಗಳಲ್ಲಿನ ಲೋಪದೋಷಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸುಮಿತಾ ಮಿಶ್ರಾ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಸದ್ಯ ಕಾರ್ಖಾನೆಯ ಒಳಗೆ ಸಿಲುಕಿರುವ ಕಾರ್ಮಿಕರ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ. ಪ್ರಸ್ತುತ ತಿಜಾರಾ ಡಿಎಸ್ಪಿ ಶಿವರಾಜ್ ಸಿಂಗ್ ಅವರ ನೇತೃತ್ವದಲ್ಲಿ ಪ್ರಾಥಮಿಕ ತನಿಖೆ ನಡೆಯುತ್ತಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *