Breaking
26 Apr 2026, Sun

ಕಳ್ಳತನ, ದರೋಡೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯ ಬಂಧನ

ಕುಂದಾಪುರ: ಕಳ್ಳತನ, ದರೋಡೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ಸೌಕೂರು ನಿವಾಸಿ ಶಶಾಂಕ್‌ ಶೆಟ್ಟಿ (32 ವ) ಎಂದು ಗುರುತಿಸಲಾಗಿದೆ.

ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ ನಾಲ್ಕು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಈತನ ವಿರುದ್ಧ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ 7 ಪ್ರಕರಣಗಳು, ಹೆಬ್ರಿ, ಬೆಂಗಳೂರಿನ ಚಂದ್ರ ಲೇಔಟ್‌ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣ ಸೇರಿದಂತೆ ಒಟ್ಟು 11 ಪ್ರಕರಣಗಳು ದಾಖಲಾಗಿದ್ದವು.

ಫೆ. 15 ರಂದು ಕುಂದಾಪುರ ತಾಲೂಕು ಬಿದ್ಕಲ್‌ ಕಟ್ಟೆ ಎಂಬಲ್ಲಿ ಈತ ಇರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕುಂದಾಪುರ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *