Breaking
26 Apr 2026, Sun

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಂಗಡಿಯಲ್ಲಿದ್ದ ಸಾಮಗ್ರಿಗಳು ಸುಟ್ಟು ಭಸ್ಮ

ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಂಗಡಿಯಲ್ಲಿದ್ದ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ ಕನ್ನುಕರೆ ಶ್ರೀನವಶಕ್ತಿ ಕಲ್ಯಾಣ ಮಂಟಪದ ಬಳಿಯ ಆಶ್ಲೇಷ ಆನ್‌ಲೈನ್ ಸೇವಾ ಕೇಂದ್ರದಲ್ಲಿ ಫೆ. 16 ರಂದು ನಡೆದಿದೆ.

ಕಳೆದ ಒಂದು ವರ್ಷದಿಂದ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ ಕನ್ನುಕರೆ ಶ್ರೀನವಶಕ್ತಿ ಕಲ್ಯಾಣ ಮಂಟಪದ ಬಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ಅಂಗಡಿಯಲ್ಲಿ ‘ಅಂಗಡಿಯ ಮಾಲೀಕರಾದ ಫಣಿರಾಜ್ ಹತ್ವಾರ್ ಕೊರವಡಿ ಅವರು ಎಂದಿನಂತೆ ಕೆಲಸ ಮುಗಿಸಿ ಅಂಗಡಿಗೆ ಬೀಗ ಹಾಕಿ ಮನೆಗೆ ತೆರಳಿದ್ದರು.

ಈ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ಸಂಭವಿಸಿ ಅಂಗಡಿಯಲ್ಲಿದ್ದ ಕಂಪ್ಯೂಟರ್, ಪ್ರಿಂಟರ್, ಸ್ಟೇಷನರಿ ವಸ್ತುಗಳು, ಇನ್ವರ್ಟರ್ ಸೇರಿದಂತೆ ಇತರ ಉಪಕರಣಗಳು ಬೆಂಕಿಗಾಹುತಿಯಾಗಿವೆ.

ಅಗ್ನಿ ಅವಘಡದಿಂದ ಅಂದಾಜು 6 ಲಕ್ಷ ರೂಪಾಯಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಮಾಹಿತಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ.

Leave a Reply

Your email address will not be published. Required fields are marked *