Breaking
26 Apr 2026, Sun

ಕಿನ್ಯ ಸಂಕೇಶದಲ್ಲಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ವಿದ್ಯಾರ್ಥಿಗಳು ಅಪಾಯದಿಂದ ಪಾರು

ಉಳ್ಳಾಲ: ಬೈಕ್‌ ಚಾಲಕನ ನಿಯಂತ್ರಣ ತಪ್ಪಿ ಬೈಕ್‌ ಸವಾರ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉಳ್ಳಾಲ ತಾಲೂಕಿನ ಕಿನ್ಯ ಸಂಕೇಶ ಎಂಬಲ್ಲಿ ಫೆ. 16 ರಂದು ನಡೆದಿದೆ.

ಅತಿ ವೇಗದ ಚಾಲನೆಯಿಂದಾಗಿ ನಿಯಂತ್ರಣ ತಪ್ಪಿದ ಬೈಕ್ ನೇರವಾಗಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ವಿದ್ಯುತ್‌ ಕಂಬ ತುಂಡಾಗಿ ತಂತಿ ಸಮೇತ ನೆಲಕ್ಕುರುಳಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೈಕ್‌ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಬಿಜಾಪುರ ಮೂಲದವರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *