Breaking
17 Feb 2026, Tue

ಸಿಎಂ- ಡಿಸಿಎಂ ಕುರ್ಚಿ ಹೋರಾಟದಲ್ಲಿ ಸಂಪೂರ್ಣವಾಗಿ ಕರ್ನಾಟಕ ರಾಜ್ಯ ಹದಗೆಟ್ಟು ಹೋಗಿದೆ -ಮಾಜಿ ಸಚಿವ ಆರಗ ಜ್ಞಾನೇಂದ್ರ ಆಕ್ರೋಶ

ಬೆಂಗಳೂರು: ಸಿಎಂ- ಡಿಸಿಎಂ ಕುರ್ಚಿ ಹೋರಾಟದಲ್ಲಿ ಸಂಪೂರ್ಣವಾಗಿ ಕರ್ನಾಟಕ ರಾಜ್ಯ ಹದಗೆಟ್ಟು ಹೋಗಿದೆ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರಿನಲ್ಲಿ ಪ್ರಸ್ತುತ ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಾಮಾನಗಳಿಗೆ ಸಂಬಂಧಪಟ್ಟಂತೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು ಕಾಂಗ್ರೆಸ್ ಸರ್ಕಾರದಲ್ಲಿ ಸೊನ್ನೆ ಅಭಿವೃದ್ಧಿ, ಈಗ ಕಿತ್ತಾಟ ಶುರುವಾಗಿದೆ. ಅದು ಎಲ್ಲಿಗೆ ಹೋಗಿ ನಿಲ್ಲುತ್ತೋ ಹೇಳೋಕೆ ಸಾಧ್ಯವಿಲ್ಲ. ಹೈಕಮಾಂಡ್ ಹೇಳಿದಂತೆ ಕೇಳ್ತೀವಿ ಅಂತಾರೆ. ಹೈಕಮಾಂಡ್ ನ ಧಿಕ್ಕರಿಸೋ ಕೆಲಸ ನಡೆದಿದೆ ಎಂದಿದ್ದಾರೆ.

ಕಾನೂನು ಸುವ್ಯವಸ್ಥೆ, ಅಭಿವೃದ್ಧಿ ಅನ್ನುವುದು ಕೆಳಮಟ್ಟಕ್ಕೆ ಕುಸಿದಿದೆ. ಬಣ ಬಡಿದಾಟದಲ್ಲಿ ಇವರು ರಾಜ್ಯ ಹಾಳು ಮಾಡ್ತಾ ಇದ್ದಾರೆ. ಕರ್ನಾಟಕ ರಾಜ್ಯ ಸಂಪತ್ಭರಿತ ರಾಜ್ಯ ಇವರ ಅಧಿಕಾರದಲ್ಲಿ ಅತ್ಯಂತ ಕೀಳು ಮಟ್ಟಕ್ಕೆ ಹೋಗ್ತಿದೆ. ಬಜೆಟ್ ಸಮಯದಲ್ಲೇ ಇವರ ಬಣ ಬಡಿದಾಟ ಜಾಸ್ತಿ ಆಗಬಹುದು ಅಂತ ಅನ್ನಿಸುತ್ತೆ ಎಂದರು.

Leave a Reply

Your email address will not be published. Required fields are marked *