Breaking
20 Jun 2026, Sat

ಉಡುಪಿ: ನೌಕಾಪಡೆಯ ಹಡಗುಗಳ ಗೌಪ್ಯ ಮಾಹಿತಿಯನ್ನು ರವಾನಿಸಿದ ಆರೋಪಿಯ ಬಂಧನ

ಉಡುಪಿ: ನೌಕಾಪಡೆಯ ಹಡಗುಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಅನಧಿಕೃತವಾಗಿ ಸಂಗ್ರಹಿಸಿ ರವಾನಿಸಿದ ಆರೋಪದಲ್ಲಿ ಮಲ್ಪೆ ಪೊಲೀಸರು ಒಬ್ಬರನ್ನು ಬಂಧಿಸಿದ್ದಾರೆ.

ಬಂಧಿತನನ್ನು ದಿ. ಇಜಾಜುಲ್ ಇಸ್ಲಾಂ ಅವರ ಪುತ್ರ ಅಲಿಫ್ ಇಸ್ಲಾಂ (21) ಎಂದು ಗುರುತಿಸಲಾಗಿದೆ.

ನೌಕಾಪಡೆಯ ಹಡಗುಗಳ ಸಂವೇದನಶೀಲ ಮಾಹಿತಿಯನ್ನು ಅನಧಿಕೃತವಾಗಿ ಸಂಗ್ರಹಿಸಿ ರವಾನಿಸಿದ್ದಾನೆ ಎಂಬ ಶಂಕೆ ಹಿನ್ನೆಲೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಫೆ. 16ರಂದು ಐದನೇ ಆರೋಪಿಯಾಗಿ ಅಲಿಫ್ ಇಸ್ಲಾಂನನ್ನು ಬಂಧಿಸಲಾಗಿದೆ. ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿ ಬಾಂಗ್ಲಾದೇಶ ಮೂಲದವನು ಎಂದು ತಿಳಿದುಬಂದಿದೆ. ಮೂಲತಃ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಬರ್ಗರಿಯಾ ಗ್ರಾಮದ ನಿವಾಸಿಯಾಗಿರುವ ಈತ, ಪ್ರಸ್ತುತ ಕೇರಳ ರಾಜ್ಯದ ಇಡುಕ್ಕಿ ಜಿಲ್ಲೆಯ ಮುನ್ನಾರ್ ತಾಲೂಕಿನ ಮರಾಯು ಗ್ರಾಮದ ಕೋಕಿಲಕಟ್ಟಾ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *