ಉಡುಪಿ: ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆಯಿಂದ ಉಂಟಾದ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಯುವಕನನ್ನು ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಕಟಪಾಡಿ ಬಳಿಯ ಸರ್ಕಾರಿಗುಡ್ಡೆ ನಿವಾಸಿ ಅಶೋಕ್ ಆಚಾರ್ಯ (33) ಎಂದು ಗುರುತಿಸಲಾಗಿದೆ.

ಅಶೋಕ್ ಅವರು ಅಸ್ಸಾಂ ರಾಜ್ಯದ ಗುವಾಹಟಿಗೆ ಪ್ರವಾಸಕ್ಕೆ ತೆರಳಿದ್ದ ವೇಳೆ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆಯಿಂದ ತೀವ್ರ ಅಸ್ವಸ್ಥರಾಗಿದ್ದರು. ತಕ್ಷಣವೇ ಅವರನ್ನು ಗುವಾಹಟಿಯ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.







