Breaking
18 Feb 2026, Wed

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ : ರಸ್ತೆ ಮರುಡಾಮಾರಿಕಾರಣ ಕಾಮಗಾರಿ ವೀಕ್ಷಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರುಡಾಮಾರಿಕಾರಣಕ್ಕಾಗಿ ಅನುದಾನ ಒದಗಿಸಿದ ಜನಪ್ರಿಯ ಶಾಸಕ ಹರೀಶ್ ಪೂಂಜಾ ಅವರು ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿಗಳನ್ನು ವೀಕ್ಷಿಸಿ, ಅಗತ್ಯ ಸಲಹೆ – ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ಶಿವಶಂಕರ ನಾಯಕ್ ರೈತಬಂಧು ಆಹಾರೋದ್ಯಮ , ಕಾರ್ಯದರ್ಶಿ ಪ್ರಪುಲ್ಲಚಂದ್ರ ಅಡ್ಯoತಾಯ. ಆಡಳಿತ ಸಮಿತಿ ಅಧ್ಯಕ್ಷರಾದ ಸದಾನಂದ ಮೇಲಾಂಟ , ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ವಿಠಲ ಶೆಟ್ಟಿ ಕೊಲ್ಲೊಟ್ಟು, ಕಾರ್ಯದರ್ಶಿ ದಿನೇಶ್ ಶೆಟ್ಟಿ ಮಲೆಂಗಲ್ಲು, ಪದ್ಮುಂಜಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಪ್ರಮುಖರಾದ ಪದ್ಮುಂಜ ಸಿ ಎ ಬ್ಯಾಂಕ್ ನಿವೃತ್ತ ಮ್ಯಾನೇಜರ್ ರಘುಪತಿ ಭಟ್ ಅನಾಬೆ, ಕೇಶವ್ ಸಾಲಿಯಾನ್, ನರಸಿಂಹ ಶೆಟ್ಟಿ ಪಣೆಕ್ಕರ , ಪ್ರದೀಪ್ ಆಳ್ವ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ ಇನ್ನು ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *