Breaking
18 Feb 2026, Wed

ಮೀನುಗಾರಿಕೆಗೆ ತೆರಳಿದ್ದ ಮೀನುಗಾರ ಹೃದಯಾಘಾತದಿಂದ ಸಾವು

ಮಲ್ಪೆ: ಮೀನುಗಾರಿಕೆಗೆ ತೆರಳಿದ್ದ ಮೀನುಗಾರ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಶಂಕರನಾರಾಯಣ ಗ್ರಾಮದ ಕ್ರೋಢಬೈಲು ನಿವಾಸಿ ಮೊಗವೀರ (54) ಎಂದು ಗುರುತಿಸಲಾಗಿದೆ.

ಸುರೇಶ್ ಅವರು ಇತರ ಮೀನುಗಾರರೊಂದಿಗೆ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *