ಬೆಳ್ತಂಗಡಿ: ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಕರಂಬಾರು ಗ್ರಾಮದ ಬೊಟ್ಟೆಲ್ ಮಾರು ಪ್ರದೇಶದ ಫಲ್ಗುಣಿ ನದಿಯಿಂದ ಅಕ್ರಮವಾಗಿ ಮರಳು ತೆಗೆದುಕೊಳ್ಳಲಾಗುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ವೇಣೂರು ಪೊಲೀಸರು ದಾಳಿ ನಡೆಸಿದರು. ಈ ವೇಳೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಪರಾರಿಯಾದ ಆರೋಪಿಗಳನ್ನು ವಸಂತ ಹಾಗೂ ರಮೇಶ್ ಎಂದು ಗುರುತಿಸಲಾಗಿದೆ.
ಪಿಕಪ್ ವಾಹನದಲ್ಲಿ ಸುಮಾರು 1 ಯುನಿಟ್ ನಷ್ಟು ಮರಳು ತುಂಬಿರುವುದು ಪತ್ತೆಯಾಗಿದ್ದು, ಅದರ ಮೌಲ್ಯ ಸುಮಾರು 5 ಸಾವಿರ ರೂ. ಆಗಿರಬಹುದೆಂದು ಅಂದಾಜಿಸಲಾಗಿದೆ.









