ಉಡುಪಿ : ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಫೆ.18 ರ ನಡೆದಿದೆ.
ಮೃತರನ್ನು ಉಡುಪಿಯಲ್ಲಿ ಖಾಸಗಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಸಂದೀಪ್ ಎಂದು ಗುರುತಿಸಲಾಗಿದೆ.

ಅಂಬಾಗಿಲು ಜಂಕ್ಷನ್ ಬಳಿಯ ಪೆರಂಪಳ್ಳಿ ಕ್ರಾಸ್ ರಸ್ತೆಯಲ್ಲಿ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದ ಪರಿಣಾಮ ಓರ್ವ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಮತ್ತೊಬ್ಬ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.








