Breaking
20 Feb 2026, Fri

ಬೆಳ್ತಂಗಡಿಯಲ್ಲಿ ಸ್ಫೋಟಕ ಸ್ಫೋಟ: ಆಟವಾಡುತ್ತಿದ್ದ ಬಾಲಕನಿಗೆ ಗಾಯ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಂದಾರು ಗ್ರಾಮದಲ್ಲಿ ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಸ್ಫೋಟಕವೊಂದು ಸ್ಫೋಟಗೊಂಡು ಬಾಲಕನೊಬ್ಬ ಗಾಯಗೊಂಡ ಘಟನೆ ನಡೆದಿದೆ.

ಗಾಯಗೊಂಡ ಬಾಲಕನನ್ನು ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಬಲಿಪೆ ನಿವಾಸಿಗಳಾದ ಮುಕುಂದ ಮತ್ತು ಜಯಶ್ರೀ ದಂಪತಿಯ ಪುತ್ರ ಅಭೀಶ್ (11) ಎಂದು ಗುರುತಿಸಲಾಗಿದೆ.

ಇಬ್ಬರು ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಚೆಂಡಿನಂತಿದ್ದ ವಸ್ತುವೊಂದು ಪತ್ತೆಯಾಗಿದೆ. ಅದನ್ನು ಚೆಂಡೆಂದು ಭಾವಿಸಿ ಕ್ರಿಕೆಟ್ ಆಡಲು ಮುಂದಾಗಿದ್ದಾರೆ. ಈ ವೇಳೆ ಒಬ್ಬನು ಬೌಲಿಂಗ್ ಮಾಡುತ್ತಿದ್ದಾಗ, ಇನ್ನೊಬ್ಬನು ಬ್ಯಾಟಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಆ ವಸ್ತು ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *