Breaking
27 Apr 2026, Mon

ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಉಳ್ಳಾಲ: ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಂಗಳೂರು ಮೂಲದ 41 ವರ್ಷದ ಅಜಯ್ ಪ್ರಸಾದ್ ಜಿ ಎಂದು ಗುರುತಿಸಲಾಗಿದೆ.

ಅಜಯ್ ಪ್ರಸಾದ್ ಜಿ ‘ನ್ಯಾನೋ ಫರಾಕ್ಸ್ ಇಂಡಿಯಾ’ ಎಂಬ ಸಂಸ್ಥೆಯ ‘ಫರಾಕ್ಸ್ ರೋಬೋಟ್’ ಸಾಫ್ಟ್‌ವೇರ್ ಮೂಲಕ ಕರೆನ್ಸಿ ಟ್ರೇಡಿಂಗ್ ಹಾಗೂ ಷೇರು ವ್ಯವಹಾರದಲ್ಲಿ ತಿಂಗಳಿಗೆ 40% ಲಾಭ ಮತ್ತು 20% ಮರುಪಾವತಿ ನೀಡುವುದಾಗಿ ಭರವಸೆ ನೀಡಿ, ಗ್ರಾಹಕರ ಐಡಿ ಕಾರ್ಡ್ ಹಾಗೂ ಇತರೆ ದಾಖಲೆಗಳನ್ನು ಪಡೆದು ವಿಶ್ವಾಸ ಹುಟ್ಟಿಸಿ ವಂಚನೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಈ ಮೂಲಕ ಸುಮಾರು ₹1 ಕೋಟಿ 20 ಲಕ್ಷ ಹಣವನ್ನು ವಂಚಿಸಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *