Breaking
21 Sep 2026, Mon

ಅಕ್ರಮ ಮರ ಸಾಗಾಟ : ಲಾರಿ ಹಾಗೂ ದಿಮ್ಮಿ ವಶ

ಸುಳ್ಯ: ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಮಾಡುತ್ತಿದ್ದ ಲಾರಿ ಹಾಗೂ ದಿಮ್ಮಿಗಳನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಬೆಳ್ಳಾರೆ–ಸೋಣಂಗೇರಿ ರಸ್ತೆಯ ಬಂಡಿಮಜಲು ಎಂಬಲ್ಲಿ ಲಾರಿಯಲ್ಲಿ ಅಕ್ರಮವಾಗಿ ಮರ ಸಾಗಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಮಂಗಳೂರು ಅರಣ್ಯ ಸಂಚಾರಿ ದಳದ ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ದಾಳಿ ನಡೆಸಿ ಪ್ರಕರಣವನ್ನು ಪತ್ತೆಹಚ್ಚಿದರು.

ಸಾಗಾಟಕ್ಕೆ ಬಳಸಿದ ಲಾರಿ ಮತ್ತು ಮರದ ದಿಮ್ಮಿಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಮೌಲ್ಯ ಸುಮಾರು 8 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *