Breaking
21 Jun 2026, Sun

ಖಾಸಗಿ ಬಸ್ ನಿರ್ವಾಹಕನ ಮೇಲೆ ವಿದ್ಯಾರ್ಥಿಗಳಿಂದ ಹಲ್ಲೆ

ತೊಕ್ಕೊಟ್ಟು: ಖಾಸಗಿ ಬಸ್ ನಿರ್ವಾಹಕನ ಮೇಲೆ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ನಡೆಸಿದ ಘಟನೆ ನಡೆದಿದೆ.

ಬಿ.ಸಿ. ರೋಡ್‌ನಿಂದ ಮುಡಿಪು ಮಾರ್ಗವಾಗಿ ಸಂಚರಿಸುತ್ತಿದ್ದ ಭವಾನಿ ಖಾಸಗಿ ಬಸ್‌ನ ನಿರ್ವಾಹಕ ಸಂಜೀವ ಅವರೊಂದಿಗೆ ರಿಯಾಯಿತಿ ದರದ ವಿಚಾರದಲ್ಲಿ ವಿದ್ಯಾರ್ಥಿಗಳ ಗುಂಪು ವಾಗ್ವಾದ ನಡೆಸಿದ್ದು, ಬಳಿಕ ಮುಡಿಪಿನಲ್ಲಿ ಹಲ್ಲೆ ನಡೆಸಿದರೆಂದು ತಿಳಿದುಬಂದಿದೆ.

ಈ ಘಟನೆಯಲ್ಲಿ ಸಂಜೀವ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಸಂಜೀವ ಅವರು ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣವನ್ನು ರಾಣಿ ಅಬ್ಬಕ್ಕ ಖಾಸಗಿ ಬಸ್ ನೌಕರರ ಸಂಘ ತೀವ್ರವಾಗಿ ಖಂಡಿಸಿದೆ.

Leave a Reply

Your email address will not be published. Required fields are marked *