ಕನ್ಯಾಡಿ: ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಉಪಾಧ್ಯಕ್ಷರ ಬಿ ರವಿಚಂದ್ರನ್ , ಸೀನಿಯರ್ ಡಿಜಿಎಂ ಗುರುರಾಜ್ ಕುಲಕರ್ಣಿ, ಸೀನಿಯರ್ ಮ್ಯಾನೇಜರ್ ಗಣೇಶ್ ಶೆಟ್ಟಿ, ಅಸಿಸ್ಟೆಂಟ್ ಮ್ಯಾನೇಜರ್ ಹರಿಯವರು ಫೆ.20 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿದರು.

ನೂತನ ಕಟ್ಟಡವನ್ನು ವೀಕ್ಷಿಸಿದ ಬಳಿಕ ಸಂಸ್ಥೆಯ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿಯನ್ನು ಪಡೆದು ಸಂತೋಷ ವ್ಯಕ್ತಪಡಿಸಿದರು.
ಈ ವೇಳೆ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ಸಹಕರಿಸುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್, ಪ್ರಗತಿಪರ ಕೃಷಿಕರು ಮತ್ತು ಸಮಾಜ ಸೇವಕರಾದ ಶ್ರೀ ಗ್ರೇಸಿಯನ್ ವೇಗಸ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.









