Breaking
21 Feb 2026, Sat

ನೆಲ್ಲಿಕಟ್ಟೆ ಬಳಿ ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಓರ್ವ ಸಾವು, ಮತ್ತೊಬ್ಬ ಗಂಭೀರ ಗಾಯ

ಕಾಸರಗೋಡು: ಬದಿಯಡ್ಕ ರಸ್ತೆಯ ನೆಲ್ಲಿಕಟ್ಟೆ ಬಳಿ ಕಾರು ಮತ್ತು ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಓರ್ವ ಮೃತಪಟ್ಟಿದ್ದು ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಇಂದು (ಫೆ. 21) ನಡೆದಿದೆ.

ಮೃತಪಟ್ಟವರನ್ನು ನೆಲ್ಲಿಕಟ್ಟೆ ನಿವಾಸಿ ಶಂಸುದ್ದೀನ್ ಪೈಕ( 68 ವ) ಎಂದು ಗುರುತಿಸಲಾಗಿದ್ದು, ಗಾಯಗೊಂಡ ವ್ಯಕ್ತಿಯನ್ನು ಸಲ್ಮಾನ್ ಹಾರಿಸ್ ( 22 ವ) ಎಂದು ಗುರುತಿಸಲಾಗಿದೆ.

ಕಾಸರಗೋಡಿನಿಂದ ಪುತ್ತೂರಿಗೆ ಹೋಗುತ್ತಿದ್ದ ಸರಕಾರಿ ಬಸ್ ಮತ್ತು ನೆಲ್ಲಿಕಟ್ಟೆಯಿಂದ ಕಾಸರಗೋಡು ರೈಲು ನಿಲ್ದಾಣಕ್ಕೆ ಸಾಗುತ್ತಿದ್ದ ಕಾರು ಪರಸ್ಪರ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಪರಿಣಾಮ ಓರ್ವ ಮೃತಪಟ್ಟಿದ್ದಾರೆ. ಇನ್ನೊಬ್ಬ ಗಂಭೀರ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *