Breaking
21 Jun 2026, Sun

ಮಾದಕ ವಸ್ತು ಮಾರಾಟಕ್ಕೆ ಯತ್ನ: ಆರೋಪಿಯ ಬಂಧನ

ಬಂಟ್ವಾಳ: ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಮೇರಮಜಲು ನಿವಾಸಿ ಪ್ರಶಾಂತ್ ಯಾನೆ ಪ್ರಸಾದ್ (30 ವ) ಎಂದು ಗುರುತಿಸಲಾಗಿದೆ.

ಬಂಟ್ವಾಳ ತಾಲೂಕಿನ ಕೊಡ್ಮಾಣು ಗ್ರಾಮದ ಪಕ್ಕಳಪಾದೆ ರಸ್ತೆ ಬದಿಯ ನಿರ್ಜನ ಜಾಗದಲ್ಲಿ ಓರ್ವ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ 180 ಗ್ರಾಂ ಗಾಂಜಾ ಮತ್ತು ದ್ವಿಚಕ್ರ ವಾಹನವನ್ನು ವಶ ಪಡಿಸಿಕೊಂಡಿದ್ದಾರೆ.

    Leave a Reply

    Your email address will not be published. Required fields are marked *