Breaking
20 Jun 2026, Sat

ಜಾಲ್ಸೂರು ಬೊಳುಬೈಲಿನಲ್ಲಿ ಭೀಕರ ಅಪಘಾತ: ನಾಲ್ವರಿಗೆ ಗಾಯ

ಸುಳ್ಯ: ತಾಲೂಕಿನ ಜಾಲ್ಸೂರಿನ ಬೊಳುಬೈಲು ಎಂಬಲ್ಲಿ ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾಗಿ ನಾಲ್ವರು ಗಾಯಗೊಂಡ ಘಟನೆ ಫೆ. 21 ರಂದು ನಡೆದಿದೆ.

ಗಾಯಗೊಂಡವರನ್ನು ವಸಂತ, ರಮ್ಯ, ರಶ್ಮಿ, ಆದ್ವಿತ್‌ ಎಂದು ಗುರುತಿಸಲಾಗಿದೆ.

ಸುಳ್ಯದ ಹಳೆಗೇಟಿನ ವಸಂತ ಅವರು ಕುಟುಂಬ ಸದಸ್ಯರೊಂದಿಗೆ ತಮ್ಮ ಗೃಹಪ್ರವೇಶ ಸಮಾರಂಭಕ್ಕಾಗಿ ಬಟ್ಟೆ ಖರೀದಿಸಲು ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಹಿಂಬದಿಯಿಂದ ವೇಗವಾಗಿ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *